
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಎರಡನೇ ಬಾರಿಗೆ ನೇಮಕವಾಗಿರುವ ಅಲ್ಲಂ ಪ್ರಶಾಂತ್ ಮತ್ತು ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಮಲ್ಲಿಕಾರ್ಜುನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ಕೆಪಿಸಿಸಿ ಉಪಾಧ್ಯಕ್ಷರಾದ ಎ.ಆರ್.ಎಂ. ಹುಸೇನ್ ಅವರು ನೂತನ ಅಧ್ಯಕ್ಷರುಗಳಿಗೆ ಕಾಂಗ್ರೆಸ್ ಧ್ವಜವನ್ನು ಹಸ್ತಾಂತರ ಮಾಡಿ, ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ತಿಳಿಸಿದರು.
ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಕೆ.ಎಸ್.ಎಲ್. ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮಾನಯ್ಯ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀನಿವಾಸುಲು, ಕರಿಬಸಪ್ಪ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಿದಾನಂದಪ್ಪ, ಮುಂಚೂಣಿ ಘಟಕಗಳ ಅಧ್ಯಕ್ಷರುಗಳಾದ ಎರಕುಲ ಸ್ವಾಮಿ, ಕಣೇಕಲ್ಲು ಮೆಹಬೂಬ್ ಸಾಬ್, ಮುರಾರ್ಜಿ ರೆಡ್ಡಿ, ಮಂಜುಳಾ ಶೇಕ್ ಅಫಾಕ್ ಹುಸೇನ್, ಅಲಿವೇಲು ಸುರೇಶ್, ಅತಾವುಲ್ಲಾ, ಮಂಜುನಾಥ್, ಮುಖಂಡರಾದ ವೆಂಕಟೇಶ್ ಹೆಗಡೆ, ಸಿಂಧುವಾಳ ಸಿದ್ದನಗೌಡ, ಬಿ.ಎಂ. ಪಾಟೀಲ್, ಮಲ್ಲಮ್ಮ, ಶ್ರೀನಿವಾಸ್, ವೆಂಕಟಲಕ್ಷ್ಮಿ ನಾರಾಯಣ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್