‘ಬೆಳೆ ದರ್ಶಕ್’ ಆಪ್ : ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 18 ಕೊನೆ
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.) 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಖಾಸಗಿ ನಿವಾಸಿಗಳಿಂದ ರೈತರ ಜಮೀನುಗಳಲ್ಲಿ ನಡೆಸಲಾದ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ತಮ್ಮ ಮೊಬ
‘ಬೆಳೆ ದರ್ಶಕ್’ ಆಪ್ : ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 18 ಕೊನೆ


ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)

2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಖಾಸಗಿ ನಿವಾಸಿಗಳಿಂದ ರೈತರ ಜಮೀನುಗಳಲ್ಲಿ ನಡೆಸಲಾದ ಬೆಳೆ ಸಮೀಕ್ಷೆಯ ವಿವರಗಳು ಸರಿಯಾಗಿ ದಾಖಲಾಗಿವೆಯೇ ಎಂಬುದನ್ನು ರೈತರು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ತಮ್ಮ ಮೊಬೈಲ್ನಲ್ಲಿ ‘ಬೆಳೆ ದರ್ಶಕ್’ ಆಪ್ ಡೌನ್ಲೋಡ್ ಮಾಡಿಕೊಂಡು, ಅದರಲ್ಲಿ ತಮ್ಮ ಜಮೀನಿನ ಬೆಳೆ ಸಮೀಕ್ಷೆಯ ವಿವರಗಳನ್ನು ವೀಕ್ಷಿಸಬಹುದಾಗಿದೆ. ಒಂದು ವೇಳೆ ಬೆಳೆದ ಬೆಳೆ, ವಿಸ್ತೀರ್ಣ ಅಥವಾ ಇತರ ವಿವರಗಳಲ್ಲಿ ಯಾವುದೇ ವ್ಯತ್ಯಾಸ ಅಥವಾ ತಪ್ಪುಗಳು ಕಂಡುಬ0ದಲ್ಲಿ, ಇದೇ ಆಪ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಳೆ ಸಮೀಕ್ಷೆಯಲ್ಲಿ ದಾಖಲಾಗುವ ನಿಖರ ಮಾಹಿತಿಯು ಸರ್ಕಾರದ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ವಿವಿಧ ಕೃಷಿ ಸಂಬ0ಧಿತ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅತ್ಯಂತ ಪ್ರಮುಖ ಆಧಾರವಾಗಿದೆ. ಹಾಗಾಗಿ ರೈತ ಬಾಂಧವರು ಅಕ್ಟೋಬರ್ 18ರ ಒಳಗಾಗಿ ತಮ್ಮ ಬೆಳೆ ಸಮೀಕ್ಷೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸವಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande