
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)
ಕರ್ನಾಟಕ ಸರ್ಕಾರದ ಉದ್ಯಮವಾದ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ (ಲಿಡ್ಕರ್) ವತಿಯಿಂದ ದಸರಾ ಹಾಗೂ ದೀಪಾವಳಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ.
16.10.2026 ರಿಂದ 08.11.2026 ರವರೆಗೆ ಬಳ್ಳಾರಿಯ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಲಿಡ್ಕರ್ ಲೆದರ್ ಎಂಪೋರಿಯ0ನಲ್ಲಿ ಲಭ್ಯವಿರುವ ಎಲ್ಲಾ ತರಹದ ಉತ್ಕೃಷ್ಟ ಗುಣಮಟ್ಟದ ಚರ್ಮದ ವಸ್ತುಗಳ ಮೇಲೆ ಶೇಕಡಾ 20 ರಷ್ಟು ವಿಶೇಷ ರಿಯಾಯಿತಿ ದೊರೆಯಲಿದೆ. ಗ್ರಾಹಕರು ಈ ಸೀಮಿತ ಅವಧಿಯ ರಿಯಾಯಿತಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಸ್ಥಳ: ಲಿಡ್ಕರ್ ಲೆದರ್ ಎಂಪೋರಿಯ0, ಮಳಿಗೆ ಸಂಖ್ಯೆ: 24, ಬುಡಾ ಕಾಂಪ್ಲೆಕ್ಸ್, ಬಳ್ಳಾರಿ. ಮಾಹಿತಿಗಾಗಿ ಸಂಪರ್ಕ ದೂರವಾಣಿ ಸಂಖ್ಯೆಗಳಾದ 08392-271741, 9844667691 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲಿಡ್ಕರ್ ಸಂಸ್ಥೆಯ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್