ರಾಜ್ಯದಲ್ಲಿ 18 ಲಕ್ಷಕ್ಕೂ ಅಧಿಕ ಮಂದಿಗೆ ಪಿಂಚಣಿ ವಿಳಂಬ: ಆರ್. ಅಶೋಕ ಆರೋಪ
ಬೆಂಗಳೂರು, 15 ಅಕ್ಟೋಬರ್ (ಹಿ.ಸ.): ಕರ್ನಾಟಕದಲ್ಲಿ ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಿಗೆ ನೀಡಬೇಕಾದ ಸಾಮಾಜಿಕ ಭದ್ರತಾ ಪಿಂಚಣಿಗಳು ಹಲವು ತಿಂಗಳಿಂದ ವಿಳಂಬವಾಗುತ್ತಿದ್ದು, 18 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿ
ಅಶೋಕ ಎಕ್ಸ್ ಪೋಸ್ಟ್


ಬೆಂಗಳೂರು, 15 ಅಕ್ಟೋಬರ್ (ಹಿ.ಸ.):

ಕರ್ನಾಟಕದಲ್ಲಿ ವೃದ್ಧರು, ವಿಧವೆಯರು ಹಾಗೂ ವಿಕಲಚೇತನರಿಗೆ ನೀಡಬೇಕಾದ ಸಾಮಾಜಿಕ ಭದ್ರತಾ ಪಿಂಚಣಿಗಳು ಹಲವು ತಿಂಗಳಿಂದ ವಿಳಂಬವಾಗುತ್ತಿದ್ದು, 18 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ₹53,428 ಕೋಟಿ ವೆಚ್ಚದಲ್ಲಿ ಮುಂದಿನ ಐದು ವರ್ಷಗಳ ಕಾಲ ರಾಷ್ಟ್ರೀಯ ಸಾಮಾಜಿಕ ನೆರವು ಕಾರ್ಯಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಈ ಮೂಲಕ 3.20 ಕೋಟಿ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಒದಗಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳುತ್ತಿದ್ದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪಿಂಚಣಿಯನ್ನೇ ಜೀವನಾಧಾರವಾಗಿ ಅವಲಂಬಿಸಿರುವ ವೃದ್ಧರು, ವಿಧವೆಯರು ಹಾಗೂ ವಿಕಲಚೇತನರು ಹಣಕ್ಕಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ಸಾಮಾಜಿಕ ಭದ್ರತಾ ಪಿಂಚಣಿ ಸರ್ಕಾರದ ದಯೆಯಲ್ಲ, ಅರ್ಹ ಫಲಾನುಭವಿಗಳ ಬದುಕಿನ ಆಸರೆ. ಅವರಿಗೆ ಸಕಾಲದಲ್ಲಿ ಪಿಂಚಣಿ ತಲುಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಪ್ರತಿಪಾದಿಸಿರುವ ಅಶೋಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರದಲ್ಲಿ ತಕ್ಷಣ ಗಮನಹರಿಸಬೇಕು. ಬಾಕಿ ಇರುವ ಪಿಂಚಣಿಯನ್ನು ಕೂಡಲೇ ಬಿಡುಗಡೆ ಮಾಡಿ, ಅರ್ಹ ಫಲಾನುಭವಿಗಳಿಗೆ ನೆರವು ತಲುಪಿಸಬೇಕು ಎಂದು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande