
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.)
ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-1ರ ವ್ಯಾಪ್ತಿಗೆ ಒಳಪಡುವ 110/11 ಕೆ.ವಿ. ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಬ್ಬಿಣದ ಕಂಬಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿ0ದ ಅಕ್ಟೋಬರ್ 16 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಎಫ್-23 ಫೀಡರನ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-23 ಫೀಡರ್: ಬಾಶಾ ಕಾಂಪೌ0ಡ್, ಆಶ್ರಯ ಕಂಫರ್ಟ್ಸ್, ದ್ವಾರಕ ಲಾಡ್ಜ್, ಗೋಳಾರಟ್ಟಿ, ಬಾಲಾಂಜಿನೇಯ ದೇವಸ್ಥಾನ, ಸಕ್ಕರೆ ಕರಡಪ್ಪ ಹಾಸ್ಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್