
ಬೆಂಗಳೂರು, 15 ಅಕ್ಟೋಬರ್ (ಹಿ.ಸ.):
ಸಫಾಯಿ ಕರ್ಮಚಾರಿಗಳ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಆರೋಗ್ಯ ತಪಾಸಣೆ ಹಾಗೂ ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಹದೇವಪುರ ವಲಯದ ಮಾರತ್ಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಸುಮಾರು 710 ಸಫಾಯಿ ಕರ್ಮಚಾರಿಗಳಿಗೆ ಹೆಲ್ತ್ ಕಾರ್ಡ್ಗಳನ್ನು ವಿತರಿಸಲಾಯಿತು.
ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕರ್ಮಚಾರಿಗಳಿಗೆ ಆರೋಗ್ಯ ತಪಾಸಣೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಮಹದೇವಪುರ ವಲಯದ ಜಂಟಿ ಆಯುಕ್ತೆ ಡಾ. ದಾಕ್ಷಾಯಿಣಿ ಕೆ., ಆರೋಗ್ಯ ವೈದ್ಯಾಧಿಕಾರಿಗಳು, ಆರೋಗ್ಯ ಮೇಲ್ವಿಚಾರಕರು, ಮಾರ್ಷಲ್ಗಳು, ಸಫಾಯಿ ಕರ್ಮಚಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R