ಬಳ್ಳಾರಿ ಜಿಲ್ಲೆಯಾದ್ಯಂತ ಅ. 21ರಿಂದ 23ರ ವರೆಗೆ ‘ಶುಷ್ಕ ದಿನ’
ಬಳ್ಳಾರಿ, 16 ಅಕ್ಟೋಬರ್ (ಹಿ.ಸ.) ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾನದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಅಕ್ಟೋಬರ್ 21ರಿಂದ 23ರ ಮಧ್ಯರಾತ್ರಿಯವರೆಗೆ ‘ಶುಷ್ಕ ದಿನ’ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶ ಹೊರಡಿಸಿದ್ದಾರೆ. ಚುನಾವಣೆಯ
ಬಳ್ಳಾರಿ ಜಿಲ್ಲೆಯಾದ್ಯಂತ ಅ. 21ರಿಂದ 23ರ ವರೆಗೆ ‘ಶುಷ್ಕ ದಿನ’


ಬಳ್ಳಾರಿ, 16 ಅಕ್ಟೋಬರ್ (ಹಿ.ಸ.)

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾನದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಅಕ್ಟೋಬರ್ 21ರಿಂದ 23ರ ಮಧ್ಯರಾತ್ರಿಯವರೆಗೆ ‘ಶುಷ್ಕ ದಿನ’ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶ ಹೊರಡಿಸಿದ್ದಾರೆ.

ಚುನಾವಣೆಯ ಮತದಾನವು ಅಕ್ಟೋಬರ್ 23ರಂದು ನಡೆಯಲಿದ್ದು, ಈ ಅವಧಿಯಲ್ಲಿ ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನ ನಡೆಸಲು ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ ನಿಯಮಗಳು 1967ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

2026ರ ಅಕ್ಟೋಬರ್ 21ರ ಸಂಜೆ 04 ಗಂಟೆಯಿ0ದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಅಬಕಾರಿ ಸನ್ನದುಗಳನ್ನು (ವೈನ್ ಶಾಪ್, ಬಾರ್, ಪಬ್ ಇತ್ಯಾದಿ) ಮುಚ್ಚಲು ಆದೇಶಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande