
ಬಳ್ಳಾರಿ, 16 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಆಲಿಸಿ ಇತ್ಯರ್ಥಗೊಳಿಸಲು ಅಕ್ಟೋಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್