ಅಕ್ಟೋಬರ್ 19 ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ
ಬಳ್ಳಾರಿ, 16 ಅಕ್ಟೋಬರ್ (ಹಿ.ಸ.) 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಅವಧಿ ಹಾಗೂ ಹಿಂಗಾರು ಹಂಗಾಮಿನ ನೀರು ನಿರ್ವಹಣೆಗೆ ಸಂಬ0ಧಿಸಿದ0ತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 127ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಅಕ್ಟೋಬರ್ 19 ರಂದು ಬೆಳಗ್ಗೆ 10:30 ಗಂಟೆಗೆ ಕೊಠಡಿ ಸಂಖ್ಯೆ: 4
ಅಕ್ಟೋಬರ್ 19 ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ


ಬಳ್ಳಾರಿ, 16 ಅಕ್ಟೋಬರ್ (ಹಿ.ಸ.)

2026-27ನೇ ಸಾಲಿನ ಮುಂಗಾರು ಹಂಗಾಮಿನ ಬಾಕಿ ಅವಧಿ ಹಾಗೂ ಹಿಂಗಾರು ಹಂಗಾಮಿನ ನೀರು ನಿರ್ವಹಣೆಗೆ ಸಂಬ0ಧಿಸಿದ0ತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 127ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಅಕ್ಟೋಬರ್ 19 ರಂದು ಬೆಳಗ್ಗೆ 10:30 ಗಂಟೆಗೆ ಕೊಠಡಿ ಸಂಖ್ಯೆ: 419, 4ನೇ ಮಹಡಿ, ವಿಕಾಸಸೌಧ, ಬೆಂಗಳೂರು ಇಲ್ಲಿ ಕರೆಯಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ, ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸಂಬ0ಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವಂತೆ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್. ಬಿ. ಮಲ್ಲಿಗವಾಡ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande