
ಬಳ್ಳಾರಿ, 17 ಅಕ್ಟೋಬರ್ (ಹಿ.ಸ.)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಈ ಬಾರಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಪ್ರಸ್ತುತ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಜಯಂತಿಯನ್ನು ವಿಜೃಂಭಣೆಯಿಲ್ಲದೆ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅಕ್ಟೋಬರ್ 21 ರಂದು ಬೆಳಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ‘ಹೊಂಗಿರಣ' ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಶ್ರೀ ಜಗದ್ಗುರು ಮಧ್ವಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿಯನ್ನು ನೆರವೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್