
ಕುಪ್ವಾರಾ, 17 ಅಕ್ಟೋಬರ್ (ಹಿ.ಸ.):
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶನಿವಾರ ನಿಯಂತ್ರಣ ರೇಖೆಯ ಮೂಲಕ ಉಗ್ರರು ಒಳನುಸುಳಲು ನಡೆಸಿದ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಉಗ್ರರು ಹತರಾಗಿರುವುದನ್ನು ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿಲ್ಲ.
ಕುಪ್ವಾರ ಜಿಲ್ಲೆಯ ಕೇರನ್ ವಲಯದ ಜುಮಗುಂಡ್ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸುಮಾರು 3.30ರ ವೇಳೆಗೆ ನಿಯಂತ್ರಣ ರೇಖೆಯ ಬಳಿ ಸೈನಿಕರು ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ್ದಾರೆ. ತಕ್ಷಣ ಕಾರ್ಯಾಚರಣೆ ಆರಂಭವಾಗಿದ್ದು, ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿರುವ ಸಾಧ್ಯತೆಯಿದ್ದು, ಅವರಿಗಾಗಿ ಹಾಗೂ ಇತರ ಸಂಭಾವ್ಯ ಒಳನುಸುಳುಕೋರರ ಪತ್ತೆಗಾಗಿ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.