
ಬೆಂಗಳೂರು, 17 ಅಕ್ಟೋಬರ್ (ಹಿ.ಸ.):
ರಾಜ್ಯಾದ್ಯಂತ ಈಶಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಬಲವಾದ ಗಾಳಿ ಬೀಸಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗಗಳಲ್ಲಿಯೂ ಅಲ್ಲಲ್ಲಿ ಭಾರಿ ಮಳೆಯಾಗಬಹುದು.
ಇನ್ನೊಂದೆಡೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.