ನೊಯ್ಡಾದಲ್ಲಿ ಒಂದೇ ಕುಟುಂಬದ ಐವರ ಸಾವು,ಆಹಾರ ವಿಷಬಾಧೆ ಶಂಕೆ
ನೋಯ್ಡಾ, 17 ಅಕ್ಟೋಬರ್ (ಹಿ.ಸ.): ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ನೊಯ್ಡಾದ ರಬೂಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆಹಾರ ವಿಷಬಾಧೆಯಿಂದ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು,
घटनास्थल पर मौजूदा भीड़ की फोटो


ನೋಯ್ಡಾ, 17 ಅಕ್ಟೋಬರ್ (ಹಿ.ಸ.):

ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ನೊಯ್ಡಾದ ರಬೂಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಗ್ಲಾ ಶ್ರೀ ಪದಮ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಆಹಾರ ವಿಷಬಾಧೆಯಿಂದ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಸಾವಿಗೆ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಪೊಲೀಸ್ ಆಯುಕ್ತರ ಮಾಧ್ಯಮ ಪ್ರತಿನಿಧಿ ಸುಬೋಧ್ ಕುಮಾರ್ ತಿಳಿಸಿರುವ ಪ್ರಕಾರ, ಶನಿವಾರ ಬೆಳಿಗ್ಗೆ ನಗ್ಲಾ ಶ್ರೀ ಪದಮ್ ಗ್ರಾಮದ ಒಂದೇ ಕುಟುಂಬದ ಐವರು ಮನೆಯಲ್ಲೇ ಮೃತಪಟ್ಟಿರುವ ಕುರಿತು ರಬೂಪುರ ಪೊಲೀಸರಿಗೆ ಮಾಹಿತಿ ಲಭಿಸಿತ್ತು.

ಮೃತರನ್ನು ಕೃಷ್ಣ ಅವರ ಪುತ್ರ ಮಹೇಶ್ (37), ಮಹೇಶ್ ಅವರ ಪತ್ನಿ ಲಲಿತ್ (35), ಪುತ್ರ ಲಡ್ಡು (11), ಪುತ್ರಿ ಮಿಷ್ಟಿ (7) ಹಾಗೂ ಮೂರು ವರ್ಷದ ಪುತ್ರ ಸಾಕ್ಷಾತ್ ಎಂದು ಗುರುತಿಸಲಾಗಿದೆ.

ಮಾಹಿತಿ ಲಭಿಸಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು, ಆಂಬುಲೆನ್ಸ್ ಸಿಬ್ಬಂದಿ ಹಾಗೂ ಆಹಾರ ಸುರಕ್ಷತಾ ಇಲಾಖೆಯ ತಂಡ ಸ್ಥಳಕ್ಕೆ ಧಾವಿಸಿತು. ಘಟನಾ ಸ್ಥಳವನ್ನು ಪರಿಶೀಲಿಸಿದ ಕ್ಷೇತ್ರ ಘಟಕ ಮತ್ತು ವಿಧಿವಿಜ್ಞಾನ ತಂಡವು ವೈಜ್ಞಾನಿಕ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮೃತರು ಹಿಂದಿನ ರಾತ್ರಿ ನೂಡಲ್ಸ್ ಸೇವಿಸಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಬೆಳಿಗ್ಗೆ ಐವರೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೀಗಾಗಿ ಪ್ರಾಥಮಿಕವಾಗಿ ಆಹಾರ ವಿಷಬಾಧೆಯ ಶಂಕೆ ವ್ಯಕ್ತವಾಗಿದೆ ಎಂದು ಸುಬೋಧ್ ಕುಮಾರ್ ತಿಳಿಸಿದ್ದಾರೆ.

ಆದರೆ, ಸಾವಿಗೆ ನಿಖರವಾದ ಕಾರಣ ಇನ್ನೂ ಖಚಿತವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಇತರ ವೈಜ್ಞಾನಿಕ ತನಿಖೆಗಳ ಫಲಿತಾಂಶ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಗ್ರೇಟರ್ ನೊಯ್ಡಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande