ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾರಥಿ ಯೋಜನೆಯಡಿ ವಾಹನ ವಿತರಣೆ
ವಿಜಯಪುರ, 17 ಅಕ್ಟೋಬರ್ (ಹಿ.ಸ.) 2025-26ನೇ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾರಥಿ ಯೋಜನೆಯಡಿ ಸಿಂದಗಿ ವಿಧಾನಸಭಾ ಕ್ಷೇತ್ರದ ಗುಬ್ಬೇವಾಡ ಗ್ರಾಮದ ಅಹ್ಮದ್ ಪಟೇಲ್ ಅವರಿಗೆ ವಾಹನ ವಿತರಿಸಲಾಯಿತು. ಸರ್ಕಾರದ ಜನಪರ ಯೋಜನೆಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಿ, ಅವರು ಸ್ವಾವಲ
ವಾಹನ ವಿತರಣೆ


ವಿಜಯಪುರ, 17 ಅಕ್ಟೋಬರ್ (ಹಿ.ಸ.)

2025-26ನೇ ಸಾಲಿನ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾರಥಿ ಯೋಜನೆಯಡಿ ಸಿಂದಗಿ ವಿಧಾನಸಭಾ ಕ್ಷೇತ್ರದ ಗುಬ್ಬೇವಾಡ ಗ್ರಾಮದ ಅಹ್ಮದ್ ಪಟೇಲ್ ಅವರಿಗೆ ವಾಹನ ವಿತರಿಸಲಾಯಿತು. ಸರ್ಕಾರದ ಜನಪರ ಯೋಜನೆಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಿ, ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸುತ್ತಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಗುಬ್ಬೇವಾಡ ಗ್ರಾಮದ ನಿವಾಸಿ ಅಹ್ಮದ್ ಪಟೇಲ್ ಅವರು 2025-26ನೇ ಸಾಲಿನ ಸಾರಥಿ ಯೋಜನೆಯಡಿ ಆಯ್ಕೆಯಾಗಿದ್ದು, ಅವರಿಗೆ ವಾಹನ ವಿತರಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದ್ದಾರೆ.

ಸರ್ಕಾರವು ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗುತ್ತವೆ. ಅದರಲ್ಲೂ ಸ್ವಂತ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ವಾಹನ ಸೌಲಭ್ಯ ದೊರೆಯುವುದರಿಂದ ಉದ್ಯೋಗದ ಮೂಲಕ ಆದಾಯ ಗಳಿಸಲು ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು ನೆರವಾಗುತ್ತದೆ.

ಸಾರಥಿ ಯೋಜನೆಯ ಉದ್ದೇಶವು ಅರ್ಹ ಫಲಾನುಭವಿಗಳಿಗೆ ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೋತ್ಸಾಹ ನೀಡುವುದಾಗಿದೆ. ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಫಲಾನುಭವಿಗಳು ತಮ್ಮ ಜೀವನದಲ್ಲಿ ಪ್ರಗತಿ ಸಾಧಿಸುವುದರೊಂದಿಗೆ ಕುಟುಂಬದ ಅಭಿವೃದ್ಧಿಗೂ ಕೊಡುಗೆ ನೀಡಬಹುದು.

ಅಹ್ಮದ್ ಪಟೇಲ್ ಅವರು ಸರ್ಕಾರದಿಂದ ದೊರೆತಿರುವ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ತಮ್ಮ ಉದ್ಯೋಗದಲ್ಲಿ ಯಶಸ್ಸು ಸಾಧಿಸಲಿ. ಆರ್ಥಿಕವಾಗಿ ಸದೃಢರಾಗಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲಿ ಎಂದು ಶಾಸಕ ಅಶೋಕ ಮನಗೂಳಿ ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande