ಪದವೀಧರರ ಹಿತರಕ್ಷಣೆಗೆ ಬದ್ಧ: ವಿಜಯೇಂದ್ರ
ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.): ಪಶ್ಚಿಮ ಪದವೀಧರ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಮತದಾರರು ಮತ್ತು ಕಾರ್ಯಕರ್ತರ ಪ್ರಚಾರ ಸಭೆ ನಡೆಸಿ ಮತಯಾಚಿಸಿದರು. ಶಿಕ್ಷಣ, ಉದ್ಯೋಗ ಹಾಗೂ ನಾಡಿ
ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ


ಹುಬ್ಬಳ್ಳಿ, 18 ಅಕ್ಟೋಬರ್ (ಹಿ.ಸ.):

ಪಶ್ಚಿಮ ಪದವೀಧರ ಕ್ಷೇತ್ರದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹುಬ್ಬಳ್ಳಿಯಲ್ಲಿ ಮತದಾರರು ಮತ್ತು ಕಾರ್ಯಕರ್ತರ ಪ್ರಚಾರ ಸಭೆ ನಡೆಸಿ ಮತಯಾಚಿಸಿದರು.

ಶಿಕ್ಷಣ, ಉದ್ಯೋಗ ಹಾಗೂ ನಾಡಿನ ಅಭಿವೃದ್ಧಿಯ ವಿಚಾರದಲ್ಲಿ ಸ್ಪಷ್ಟ ನಿಲುವು ಮತ್ತು ಬದ್ಧತೆ ಹೊಂದಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗೆ ಪದವೀಧರ ಸಮುದಾಯ ಮತ್ತೊಮ್ಮೆ ಆಶೀರ್ವಾದ ಮಾಡಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ವಿಜಯೇಂದ್ರ ತಿಳಿಸಿದರು.

ಪದವೀಧರರ ಹಿತರಕ್ಷಣೆ ಹಾಗೂ ಅವರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮೈತ್ರಿಕೂಟ ಬದ್ಧವಾಗಿದೆ. ಎಸ್.ವಿ. ಸಂಕನೂರು ಅವರನ್ನು ಗೆಲ್ಲಿಸುವ ಸಂಕಲ್ಪದೊಂದಿಗೆ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಸಂಸದರು, ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್, ಶಾಸಕ ಮಹೇಶ್ ಟೆಂಗಿನಕಾಯಿ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಪರಿಶಿಷ್ಟ ಜಾತಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ್, ವಿಭಾಗ ಪ್ರಭಾರಿ ಜಯತೀರ್ಥ ಕಟ್ಟಿ ಸೇರಿದಂತೆ ಹಲವು ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande