ಪದವೀಧರರ ಹಿತಕ್ಕಾಗಿ ಸಂಕನೂರು ನಿರಂತರ ಶ್ರಮ: ಪ್ರಹ್ಲಾದ ಜೋಶಿ
ಕುಮಟಾ, 18 ಅಕ್ಟೋಬರ್ (ಹಿ.ಸ.): ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕುಮಟಾದ ರೋಟರಿ ನಾದಶ್ರೀ ಕಲಾ ಕೇಂದ್ರದಲ್ಲಿ ಮತದಾರರ ಸಭೆ ನಡೆಸಿ ಚುನಾವಣಾ ಪ್ರಚಾರ ಮಾಡಿದರು. ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರಗ
ಪ್ರಹ್ಲಾದ ಜೋಶಿ


ಕುಮಟಾ, 18 ಅಕ್ಟೋಬರ್ (ಹಿ.ಸ.):

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಅವರ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕುಮಟಾದ ರೋಟರಿ ನಾದಶ್ರೀ ಕಲಾ ಕೇಂದ್ರದಲ್ಲಿ ಮತದಾರರ ಸಭೆ ನಡೆಸಿ ಚುನಾವಣಾ ಪ್ರಚಾರ ಮಾಡಿದರು.

ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರು, ಘಟಕಗಳ ನಾಯಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಅವರು, ಅಭ್ಯರ್ಥಿ ಎಸ್.ವಿ. ಸಂಕನೂರು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳ ಕುರಿತು ಸಂಕನೂರು ಅವರು ವಿಧಾನ ಪರಿಷತ್ತಿನಲ್ಲಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಕಳೆದ 12 ವರ್ಷಗಳಿಂದ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಪದವೀಧರರ ಹಿತಾಸಕ್ತಿಗಳ ರಕ್ಷಣೆಗೆ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ಮತ್ತೊಮ್ಮೆ ಬೆಂಬಲ ನೀಡಬೇಕು ಎಂದು ಪ್ರಹ್ಲಾದ ಜೋಶಿ ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande