ಕಲಬುರಗಿಯಲ್ಲಿ ಕಲ್ಯಾಣ ಶಿಕ್ಷಕರ ಕ್ಷೇತ್ರದ ಮುಖಂಡರ ಸಭೆ
ಕಲಬುರಗಿ, 18 ಅಕ್ಟೋಬರ್ (ಹಿ.ಸ.): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿ, ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆಗಳ ಕ
ಕಾಂಗ್ರೆಸ್ ಸಭೆ


ಕಲಬುರಗಿ, 18 ಅಕ್ಟೋಬರ್ (ಹಿ.ಸ.):

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ ಕಲ್ಯಾಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾಗವಹಿಸಿ, ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆಗಳ ಕುರಿತು ಚರ್ಚಿಸಿದರು.

ಶಿಕ್ಷಕರ ಹಿತಾಸಕ್ತಿ ಕಾಪಾಡುವುದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಹಾಗೂ ಶಿಕ್ಷಕರ ನ್ಯಾಯಯುತ ಬೇಡಿಕೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಂಘಟಿತರಾಗಿ ಕಾರ್ಯನಿರ್ವಹಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರನ್ನು ಗೆಲ್ಲಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಈಶ್ವರ್ ಖಂಡ್ರೆ, ಶರಣ ಪ್ರಕಾಶ್ ಪಾಟೀಲ್, ಶಿವರಾಜ್ ತಂಗಡಗಿ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ್, ಕನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು, ಜಗದೇವ್ ಗುತ್ತೇದಾರ್ ಹಾಗೂ ಮಾಜಿ ಶಾಸಕ ಬಾಬೂರಾವ್ ಚಿಂಚನಸೂರ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande