ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ವೈಭವ
ಮೈಸೂರು, 18 ಅಕ್ಟೋಬರ್ (ಹಿ.ಸ.): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾತಗಳ್ಳಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜು ಸಮೀಪ ಮೊದಲ ಬಾರಿಗೆ ಆಯೋಜಿಸಿರುವ ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ಕಂಬಳಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ
ಕಂಬಳಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಚಾಲನೆ


ಮೈಸೂರು, 18 ಅಕ್ಟೋಬರ್ (ಹಿ.ಸ.):

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಾತಗಳ್ಳಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜು ಸಮೀಪ ಮೊದಲ ಬಾರಿಗೆ ಆಯೋಜಿಸಿರುವ ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ಕಂಬಳಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿಯ ಮಣ್ಣಿನ ಸೊಗಡು, ಜನಪದ ಪರಂಪರೆ ಮತ್ತು ಗ್ರಾಮೀಣ ಸಂಸ್ಕೃತಿಯ ಪ್ರತೀಕವಾಗಿರುವ ಕಂಬಳವು 2026ರ ದಸರಾ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕ್ರೀಡೆಗೆ ಪ್ರೋತ್ಸಾಹ ನೀಡುವುದರ ಜತೆಗೆ ಯುವಜನತೆಗೆ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಿಚಯಿಸುವ ಸದುದ್ದೇಶದಿಂದ ಈ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಂಬಳ ಕ್ರೀಡಾಕೂಟದಲ್ಲಿ ಭಾಗವಹಿಸಲು ಕರಾವಳಿ ಭಾಗದಿಂದ 150ಕ್ಕೂ ಹೆಚ್ಚು ಜೋಡಿ ಕೋಣಗಳು ಆಗಮಿಸಿವೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಕೋಣಗಳಿಗೆ ಉತ್ತಮ ಮೇವು, ಆಹಾರ ಹಾಗೂ ವಿಶೇಷ ಪಶುವೈದ್ಯಕೀಯ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಬಳದ ವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸುವ ಅಪಾರ ಸಂಖ್ಯೆಯ ಜನರಿಗೂ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಕಂಬಳ ಕ್ರೀಡಾಕೂಟದ ಯಶಸ್ವಿ ಆಯೋಜನೆಗಾಗಿ ಹಗಲಿರುಳು ಶ್ರಮಿಸಿದ ಜಿಲ್ಲಾಡಳಿತ ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande