ಮಳೆಯ ನಡುವೆ ಹಬ್ಬದ ಖರೀದಿಗೆ ಕೆ.ಆರ್. ಮಾರುಕಟ್ಟೆಯಲ್ಲಿ ಜನಸಾಗರ
ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಯ ನಡುವೆಯೂ ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಬಾಳೆಕಂದು ಹಾಗೂ ಕುಂಬಳಕಾಯಿ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಮಳೆಯ ನಡುವೆ ವಾಹನ ದಟ್ಟಣೆಯಿಂದ ಸಂಚಾರವೂ ನಿಧಾನಗೊಂಡಿದೆ.
bengaluru-kr-market-ayudha-puja-festival-shopping-rain


ಬೆಂಗಳೂರು, 18 ಅಕ್ಟೋಬರ್ (ಹಿ.ಸ.):

ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿಲ್ಲ. ನಗರದಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದ್ದರೂ, ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಸಿದ್ಧತೆಗಾಗಿ ಮಾರುಕಟ್ಟೆಗಳತ್ತ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಕೆ.ಆರ್. ಮಾರುಕಟ್ಟೆಯಲ್ಲಿ ಭಾನುವಾರ ಹಬ್ಬದ ಖರೀದಿ ಭರಾಟೆ ಜೋರಾಗಿದೇ.

ಮಂಗಳವಾರ ನಡೆಯಲಿರುವ ಆಯುಧಪೂಜೆ ಹಾಗೂ ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಬಾಳೆಕಂದು, ಕುಂಬಳಕಾಯಿ ಸೇರಿದಂತೆ ಪೂಜೆಗೆ ಅಗತ್ಯವಾದ ಸಾಮಗ್ರಿಗಳ ಖರೀದಿ ಚುರುಕುಗೊಂಡಿದೆ. ಕುಟುಂಬ ಸಮೇತ ಮಾರುಕಟ್ಟೆಗೆ ಆಗಮಿಸಿದ ಜನರು ಹಬ್ಬದ ಆಚರಣೆಗೆ ಬೇಕಾದ ವಸ್ತುಗಳನ್ನು ಖರೀದಿಸುವಲ್ಲಿ ನಿರತರಾಗಿದ್ದರು.

ಮೋಡ ಕವಿದ ವಾತಾವರಣ ಹಾಗೂ ನಿರಂತರ ಮಳೆಯ ನಡುವೆಯೂ ಜನರು ಖರೀದಿಗೆ ಮುಗಿಬಿದ್ದ ದೃಶ್ಯ ಕೆ.ಆರ್. ಮಾರುಕಟ್ಟೆಯಲ್ಲಿ ಕಂಡುಬಂತು. ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಚುರುಕುಗೊಂಡಿದ್ದು, ಮಾರುಕಟ್ಟೆಯ ವಿವಿಧ ಭಾಗಗಳಲ್ಲಿ ಜನದಟ್ಟಣೆ ಹೆಚ್ಚಾಗಿತ್ತು.

ಇನ್ನೊಂದೆಡೆ, ಮಳೆ ಮತ್ತು ವಾಹನಗಳ ದಟ್ಟಣೆಯಿಂದ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿಧಾನಗೊಂಡಿತು. ವಾಹನ ಸವಾರರು ಟ್ರಾಫಿಕ್ ಜಾಮ್ನಿಂದಾಗಿ ಪರದಾಡುವಂತಾಯಿತು. ಮಳೆಯ ಅಬ್ಬರದ ನಡುವೆಯೂ ಹಬ್ಬದ ಖರೀದಿಯಲ್ಲಿ ತೊಡಗಿದ್ದ ಜನರ ಉತ್ಸಾಹ ಮಾತ್ರ ಕಡಿಮೆಯಾಗಿರಲಿಲ್ಲ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande