
ಮಂಗಳೂರು, 18 ಅಕ್ಟೋಬರ್ (ಹಿ.ಸ.):
ಚರ್ಚ್ ಗೆ ಪ್ರಾರ್ಥನೆಗೆಂದು ಬರುತ್ತಿದ್ದ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪದಲ್ಲಿ ಚರ್ಚ್ ಪಾದ್ರಿಯನ್ನು ಮಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ.
ಈತ ಪ್ರಾರ್ಥನೆಗಾಗಿ ಚರ್ಚ್ ಗೆ ಹೋಗುವ ಬಾಲಕರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಇಬ್ಬರು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದು, ಪೋಷಕರು ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪೊಲೀಸರು, ಆರೋಪಿ ಸಿಪ್ರಿಯನ್ ಪಿಂಟೋನನ್ನು ಬಂಧಿಸಿದ್ದಾರೆ.
ಚರ್ಚ್ ಗೆ ಬರುತ್ತಿದ್ದ ಬಾಲಕನಿಗೆ ಪಾದ್ರಿ 'Sweet boy I Love You' ಎಂದು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕರು ಈ ಬಗ್ಗೆ ತಮ್ಮ ಪೋಷರಿಗೆ ವಿಷಯ ತಿಳಿಸಿದ್ದರು. ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ತನ್ನ ವಿರುದ್ಧ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಸಿಪ್ರಿಯನ್ ಪಿಂಟೋ ತಲೆಮರೆಸಿಕೊಂಡಿದ್ದ.
ಹಾಸನ ಜಿಲ್ಲೆಯ ಸಕಲೇಶಪುರದ ಸಂಬಂಧಿ ಮನೆಯಲ್ಲಿ ಅಡಗಿಕೊಂಡಿರುವ ಬಗ್ಗೆ ಪೊಲೀಸರುಗೆ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R