
ನವದೆಹಲಿ, 19 ಅಕ್ಟೋಬರ್ (ಹಿ.ಸ.):
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಜೀವನದಲ್ಲಿ ಸುಖ-ಸಮೃದ್ಧಿ ತರುವ ಹಾಗೂ ಅವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಕುರಿತು ಮಾರ್ಗದರ್ಶನ ಪಡೆದರು.
ಪ್ರಧಾನಿ ಕಚೇರಿಯು ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ನಾಯಕರ ಭೇಟಿಯ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಈ ಮಾಹಿತಿಯನ್ನು ತಿಳಿಸಿದೆ.
ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿರುವ ಭೂಪೇಂದ್ರ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸೌಭಾಗ್ಯ ದೊರೆತಿದೆ. ರಾಜ್ಯದ ಬಡವರು, ಯುವಕರು, ಅನ್ನದಾತರು ಹಾಗೂ ಮಹಿಳೆಯರ ಜೀವನದಲ್ಲಿ ಸುಖ-ಸಮೃದ್ಧಿ ತರಲು ಮತ್ತು ಅವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಕುರಿತು ಪ್ರಧಾನಿಯವರ ಮಾರ್ಗದರ್ಶನ ಲಭಿಸಿದೆ ಎಂದು ತಿಳಿಸಿದ್ದಾರೆ.
‘ವಿಕಸಿತ ಗುಜರಾತ್, ವಿಕಸಿತ ಭಾರತ’ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪ್ರಧಾನಿಯವರೊಂದಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿರುವುದಾಗಿ ಅವರು ಹೇಳಿದ್ದಾರೆ.
ಪ್ರಧಾನಿಯವರನ್ನು ಭೇಟಿಯಾದಾಗಲೆಲ್ಲ ಹೊಸ ಶಕ್ತಿ ಮತ್ತು ಉತ್ಸಾಹ ದೊರೆಯುತ್ತದೆ ಎಂದು ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.