ನವರಾತ್ರಿಯ ದುರ್ಗಾ ಮಂಡಲ ಮಹಾಪೂಜೆಯಲ್ಲಿ ಸಚಿವ ಎಂ.ಬಿ. ಪಾಟೀಲ ಭಾಗಿ
ವಿಜಯಪುರ, 19 ಅಕ್ಟೋಬರ್ (ಹಿ.ಸ.) ಭಕ್ತಿ-ಶ್ರದ್ಧೆಯ ಸಂಗಮವಾದ ನವರಾತ್ರಿ ಉತ್ಸವದ ಅಂಗವಾಗಿ ನಗರದ ನಿಂಬರಗಿ ಬಡಾವಣೆಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ದುರ್ಗಾ ಮಾತೆಯ ಮಹಾಪೂಜೆಯಲ್ಲಿ ಸಚಿವ ಎಂ.ಬಿ. ಪಾಟೀಲ ಭಾಗವಹಿಸಿ ದೇವಿಯ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು. ದೇವಸ್ಥಾನದಲ್ಲಿ ಸ
ದುರ್ಗಾ ಪೂಜೆ


ವಿಜಯಪುರ, 19 ಅಕ್ಟೋಬರ್ (ಹಿ.ಸ.)

ಭಕ್ತಿ-ಶ್ರದ್ಧೆಯ ಸಂಗಮವಾದ ನವರಾತ್ರಿ ಉತ್ಸವದ ಅಂಗವಾಗಿ ನಗರದ ನಿಂಬರಗಿ ಬಡಾವಣೆಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ದುರ್ಗಾ ಮಾತೆಯ ಮಹಾಪೂಜೆಯಲ್ಲಿ ಸಚಿವ ಎಂ.ಬಿ. ಪಾಟೀಲ ಭಾಗವಹಿಸಿ ದೇವಿಯ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.

ದೇವಸ್ಥಾನದಲ್ಲಿ ಸಾಲಿಗ್ರಾಮ ಶಿಲಾಮಯ ಶ್ರೀ ವೆಂಕಟೇಶ್ವರ ಸ್ವಾಮಿ ಹಾಗೂ ಶ್ರೀ ದುರ್ಗಾ ಮಾತೆಯ ದರ್ಶನ ಪಡೆದ ಸಚಿವರು, ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು. ನವರಾತ್ರಿ ಹಬ್ಬದ ಪವಿತ್ರ ಸಂದರ್ಭದಲ್ಲಿ ನಡೆದ ಮಹಾಪೂಜೆಯಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ವ್ಯಾಸ-ಮಧ್ವ ಸಂಸ್ಕೃತ ವಿದ್ಯಾಲಯದ ಧರ್ಮದರ್ಶಿಗಳಾದ ಪಂಡಿತ ವೇದನಿಧಿ ಆಚಾರ್ಯ, ಬ್ರಾಹ್ಮಣ ಸಮಾಜದ ಹಿರಿಯರಾದ ಪಂಡಿತ ಮಧ್ವಾಚಾರ್ಯ ಮೊಕಾಶಿ, ಸಮಾಜದ ಅಧ್ಯಕ್ಷರಾದ ಡಾ. ಉಪೇಂದ್ರ ನರಸಾಪುರ, ಆನಂದ ಜೋಶಿ, ಗಿರೀಶ ಅಕಮಂಚಿ, ರಾಘವೇಂದ್ರ ಪುರೋಹಿತ, ಎಂ.ಕೆ. ಜೋಶಿ, ತಡಸ್ ಸೇರಿದಂತೆ ವಿಪ್ರ ಸಮಾಜದ ಮುಖಂಡರು, ಬಂಧುಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸರ್ವರ ಬಾಳಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ

ಶ್ರೀ ದುರ್ಗಾ ಮಾತೆಯ ಕೃಪಾಶೀರ್ವಾದದಿಂದ ನಾಡಿನ ಜನರ ಬಾಳಿನಲ್ಲಿ ಸುಖ, ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ. ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಮತ್ತು ಭಕ್ತಿಭಾವ ಮತ್ತಷ್ಟು ವೃದ್ಧಿಯಾಗಲಿ. ಸರ್ವರಿಗೂ ಒಳಿತಾಗುವ ಮೂಲಕ ಲೋಕಕಲ್ಯಾಣವಾಗಲಿ ಎಂದು ಪ್ರಾರ್ಥಿಸುವುದಾಗಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

ನವರಾತ್ರಿ ಉತ್ಸವವು ಧಾರ್ಮಿಕ ಶ್ರದ್ಧೆಯ ಜೊತೆಗೆ ಸಮಾಜದಲ್ಲಿ ಏಕತೆ, ಭಕ್ತಿ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಲಪಡಿಸುವ ಮಹತ್ವದ ಸಂದರ್ಭವಾಗಿದೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಸದ್ಭಾವನೆ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸಲು ಸಹಕಾರಿಯಾಗುತ್ತವೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande