
ಬಳ್ಳಾರಿ, 19 ಅಕ್ಟೋಬರ್ (ಹಿ.ಸ.):
ಬಳ್ಳಾರಿ ಜಿಲ್ಲಾ ಪೊಲೀಸ್ ವತಿಯಿಂದ ‘ಪೊಲೀಸ್ ಹುತಾತ್ಮರ ದಿನಾಚರಣೆ’ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದು , ಮುಖ್ಯ ಅತಿಥಿಗಳಾಗಿ ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಸಿದ್ದಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಪಿ.ಎಸ್. ಹರ್ಷ ಅವರು ವಹಿಸಲಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸುಮನ್ ಡಿ. ಪೆನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಎನ್. ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್