ಬಾಗಲಕೋಟೆ ಬಿಜೆಪಿ ಕಚೇರಿಯಲ್ಲಿ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಬಾಗಲಕೋಟೆ, 02 ಅಕ್ಟೋಬರ್ (ಹಿ.ಸ.) ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಎರಡನೇ ಪ್ರಧಾನಮಂತ್ರಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಕಾರ್ಯಾಲಯದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ
ಜಯಂತಿ


ಬಾಗಲಕೋಟೆ, 02 ಅಕ್ಟೋಬರ್ (ಹಿ.ಸ.)

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಎರಡನೇ ಪ್ರಧಾನಮಂತ್ರಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಕಾರ್ಯಾಲಯದಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ, ಅವರ ದೇಶಸೇವೆ ಹಾಗೂ ಆದರ್ಶಗಳನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧೀಜಿ ಅವರು ಸತ್ಯ, ಅಹಿಂಸೆ ಮತ್ತು ಶಾಂತಿಯ ಮಾರ್ಗದ ಮೂಲಕ ದೇಶದ ಜನರಲ್ಲಿ ರಾಷ್ಟ್ರೀಯ ಚೈತನ್ಯ ಮೂಡಿಸಿದರೆ, ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳತೆ, ಪ್ರಾಮಾಣಿಕತೆ, ಶಿಸ್ತು ಹಾಗೂ ದೇಶಭಕ್ತಿಯ ಮೂಲಕ ಸಾರ್ವಜನಿಕ ಜೀವನಕ್ಕೆ ವಿಶಿಷ್ಟ ಮಾದರಿಯಾಗಿದ್ದಾರೆ ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮತ್ತು ಮೌಲ್ಯಗಳು ಇಂದಿನ ಪೀಳಿಗೆಗೂ ಪ್ರೇರಣೆಯಾಗಿವೆ ಎಂದು ತಿಳಿಸಿದರು. ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆಯ ತತ್ವಗಳು ಹಾಗೂ ಶಾಸ್ತ್ರಿ ಅವರ ಸರಳ ಜೀವನ, ಕರ್ತವ್ಯನಿಷ್ಠೆ ಮತ್ತು ರಾಷ್ಟ್ರದ ಮೇಲಿನ ಬದ್ಧತೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ದೇಶದ ಸ್ವಾತಂತ್ರ್ಯ ಹೋರಾಟ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ಈ ಇಬ್ಬರು ಮಹನೀಯರ ಕೊಡುಗೆಗಳನ್ನು ಸ್ಮರಿಸುವುದು ಕೇವಲ ಜಯಂತಿ ಆಚರಣೆಗೆ ಸೀಮಿತವಾಗದೆ, ಅವರ ಆದರ್ಶಗಳನ್ನು ಸಮಾಜದಲ್ಲಿ ಬೆಳೆಸುವ ಸಂಕಲ್ಪವಾಗಬೇಕು ಎಂದು ಭಾಂಡಗೆ ಹೇಳಿದರು.

ಕಾರ್ಯಕ್ರಮದಲ್ಲಿ ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ವಿಭಾಗೀಯ ಸಹಪ್ರಭಾರಿಗಳಾದ ಬಸವರಾಜ ಯಂಕಂಚಿ, ಜಿ.ಎನ್. ಪಾಟೀಲ, ಉಮೇಶ ಹಂಚಿನಾಳ, ಯಲ್ಲಪ್ಪ ಬೆಂಡಿಗೇರಿ, ಮುತ್ತಣ್ಣ ಬೆಣ್ಣೂರ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande