

ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಮಹಾನೀಯರ ಜಯಂತಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಶುಕ್ರವಾರ ಆಚರಣೆ ಮಾಡಲಾಯಿತು.
ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್, ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು, ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಗಳಾದ ಸೊಂತ ಗಿರಿಧರ, ಪಿ.ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ವಿ.ರಾಮಚಂದ್ರ, ಮಾಜಿ ಅಧ್ಯಕ್ಷರಾದ ಡಾ. ಡಿ.ಎಲ್. ರಮೇಶಗೋಪಾಲ್, ವಿವಿಧ ಕಮಿಟಿ ಚೇರ್ಮನ್ಗಳಾದ ನಾಗಳ್ಳಿ ರಮೇಶ್, ವೇಣುಗೋಪಾಲ ಗುಪ್ತ, ಕೌಡಕಿ ಹನುಮೇಶಬಾಬು, ಬಿ. ಸುರೇಂದ್ರ ಕುಮಾರ ಬಫ್ನಾ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್