
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)
ಗಾಂಧಿ ವಿಚಾರ ವೇದಿಕೆ ಮತ್ತು ರಾಷ್ಟ್ರೀಯ ಬಸವದಳದ ಸಹಯೋಗದಲ್ಲಿ ಮಹಾತ್ಮಾ ಗಾಂಧೀ ಅವರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಕಾರ್ಮಿಕ ಮುಖಂಡ ಟಿ.ಜಿ. ವಿಠ್ಠಲ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಗಾಂಧಿ ವಿಚಾರ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ಎಪಿಜೆ ಅಬ್ದುಲ್ ಕಲಾಂ ಪ್ರೌಢಶಾಲೆಯ ಶಿಕ್ಷಕ ಡಾ. ನಾಗರಾಜ ಬಸರಕೋಡು ಅವರು ಮಹಾತ್ಮಾ ಗಾಂಧೀಜಿ ಅವರ ಪ್ರಸ್ತುತತೆ ಮತ್ತು ಚಿಂತನೆಗಳ ಕುರಿತು ಉಪನ್ಯಾಸ ನೀಡಿದರು.
ವೀರಶೈವ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಶಾಮೂರ್ತಿ ಅವರು ಮುಖ್ಯ ಅತಿಥಿಗಳಾಗಿದ್ದರು. ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನಾಗರಾಜ್, ರಾಷ್ಟ್ರೀಯ ಬಸವದಳದ ಗೌರವ ಕಾರ್ಯದರ್ಶಿ ಕೆ.ವಿ. ರವಿಶಂಕರ ಅವರು ವೇದಿಕೆಯಲ್ಲಿದ್ದರು.
ರಾಷ್ಟ್ರೀಯ ಬಸವದಳದ ಕಾರ್ಯದರ್ಶಿಗಳಾದ ಟಿ. ಮಲ್ಲಿಕಾರ್ಜುನ ಅವರು ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್