
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಭಾವಚಿತ್ರಗಳಿಗೆ ಪುಷ್ಪ ನಮಗಳನ್ನು ಸಲ್ಲಿಸುವ ಮೂಲಕ ಗಣ್ಯರ ಜಯಂತಿಗಳನ್ನು ಶುಕ್ರವಾರ ಆಚರಿಸಿದೆ.
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರು ಕಾರ್ಯಕ್ರಮದ ನೇತೃತ್ವವಹಿಸಿದ್ದರು. ಪಕ್ಷದ ಪದಾಧಿಕಾರಿಗಳು - ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್