ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹನೀಯರ ಜಯಂತಿ ಆಚರಣೆ
ಬಳ್ಳಾರಿ, 02 ಅಕ್ಟೋಬರ್ (ಹಿ.ಸ.) ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ, ಇಬ್ಬರು ಮಹನೀಯರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು. ಸತ್ಯ, ಅಹಿಂಸೆ,
ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹನೀಯರ ಜಯಂತಿ ಆಚರಣೆ


ಬಳ್ಳಾರಿ, 02 ಅಕ್ಟೋಬರ್ (ಹಿ.ಸ.)

ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿ, ಇಬ್ಬರು ಮಹನೀಯರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.

ಸತ್ಯ, ಅಹಿಂಸೆ, ಸರಳತೆ, ಪ್ರಾಮಾಣಿಕತೆ ಹಾಗೂ ದೇಶಭಕ್ತಿಯಂತಹ ಮಹಾನ್ ಆದರ್ಶಗಳನ್ನು ತಮ್ಮ ಜೀವನದ ಮೂಲಕ ದೇಶಕ್ಕೆ ತೋರಿಸಿಕೊಟ್ಟ ಈ ಇಬ್ಬರು ಮಹನೀಯರ ಚಿಂತನೆಗಳು ಮತ್ತು ಆದರ್ಶಗಳು ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಸ್ಮರಿಸಲಾಯಿತು.

ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande