ಜಂತರ್-ಮಂತರ್ನಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ
ನವದೆಹಲಿ, 02 ಅಕ್ಟೋಬರ್ (ಹಿ.ಸ.): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಜಂತರ್‌-ಮಂತರ್‌ನಲ್ಲಿ ಶುಕ್ರವಾರ ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಪ್ರ
आआप नेता आतिशी सहित अन्य लोग पुलिस हिरासत में।


ನವದೆಹಲಿ, 02 ಅಕ್ಟೋಬರ್ (ಹಿ.ಸ.):

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ದೆಹಲಿಯ ಜಂತರ್‌-ಮಂತರ್‌ನಲ್ಲಿ ಶುಕ್ರವಾರ ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಎಡಪಕ್ಷಗಳು, ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘಟನೆಗಳು ಜಂತರ್‌-ಮಂತರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸುತ್ತಿರುವ ರೀತಿಯನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಅನುಮತಿ ನೀಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೂ ಸಾಮಾಜಿಕ ಕಾರ್ಯಕರ್ತರು ಹಾಗೂ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ, ಎನ್‌ಎಸ್‌ಯುಐ ಮತ್ತು ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ ಸೇರಿದಂತೆ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಅನುಮತಿ ಇಲ್ಲದೆ ಜನರು ಗುಂಪುಗೂಡುವುದನ್ನು ತಡೆಯಲು ಪೊಲೀಸರು ಕ್ರಮ ಕೈಗೊಂಡರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಂತರ್‌-ಮಂತರ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿತ್ತು. ಜಂತರ್‌-ಮಂತರ್‌ಗೆ ಸುಲಭವಾಗಿ ತೆರಳಬಹುದಾದ ದೆಹಲಿಯ ಸುಮಾರು 11 ಮೆಟ್ರೊ ನಿಲ್ದಾಣಗಳನ್ನು ಬೆಳಗ್ಗೆಯಿಂದಲೇ ಮುಚ್ಚಲಾಗಿತ್ತು. ಹಲವು ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾ ಪ್ರದೇಶದಲ್ಲಿ ಅಂತರ್ಜಾಲ ಸೇವೆಯನ್ನೂ ಸ್ಥಗಿತಗೊಳಿಸಲಾಗಿತ್ತು.

ಪ್ರತಿಭಟನೆ ವೇಳೆ ಆಮ್‌ ಆದ್ಮಿ ಪಕ್ಷದ ನಾಯಕರಾದ ಆತಿಶಿ, ಸೌರಭ್‌ ಭಾರದ್ವಾಜ್‌, ಸಂಜಯ್‌ ಸಿಂಗ್‌ ಸೇರಿದಂತೆ 1,100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನೂ ವಶಕ್ಕೆ ಪಡೆಯಲಾಯಿತು. ಯೋಗೇಂದ್ರ ಯಾದವ್‌ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ಮನೋಜ್‌ ಝಾ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರನ್ನು ನಾರ್ತ್‌ ಅವೆನ್ಯೂ ಸಮೀಪದಲ್ಲೇ ಪೊಲೀಸರು ತಡೆದರು. ಪ್ರತಿಭಟನಾ ಸ್ಥಳದತ್ತ ತೆರಳಲು ಅವರು ಪ್ರಯತ್ನಿಸಿದರೂ ಪೊಲೀಸರು ಅವರನ್ನು ಮುಂದೆ ಹೋಗಲು ಅವಕಾಶ ನೀಡಲಿಲ್ಲ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande