ಸಿಇಒ ಕಚೇರಿಯಲ್ಲಿ ಪ್ರತಿಭಟನೆ: ಸಿಎಂ, ಸಚಿವರ ವಿರುದ್ಧ ಬಿಜೆಪಿ ದೂರು
ಸಿಇಒ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರ ವಿರುದ್ಧ ಬಿಜೆಪಿ ನಿಯೋಗವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಕಾನೂನು ಕ್ರಮಕ್ಕೆ ಆಗ್ರಹಿಸ
bjp-complaint-against-cm-dk-shivakumar-ministers-over-ceo-office-protest


ಬೆಂಗಳೂರು, 02 ಅಕ್ಟೋಬರ್ (ಹಿ.ಸ.):

ಮತದಾರರ ಪಟ್ಟಿ ಪರಿಷ್ಕರಣೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿ ಆವರಣದಲ್ಲಿ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗವು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ನ್ಯಾಯಾಲಯದ ನಿರ್ದೇಶನದಂತೆ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್ಗೆ ಸೀಮಿತಗೊಳಿಸಲಾಗಿದ್ದರೂ, ಸಿಎಂ ಹಾಗೂ ಸಚಿವರು ಸಿಇಒ ಕಚೇರಿ ಆವರಣದಲ್ಲೇ ಧರಣಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಿಯೋಗ ಒತ್ತಾಯಿಸಿದೆ.

ಇನ್ನು, ಗುರುವಾರ ಸಿಇಒ ಕಚೇರಿಗೆ ತೆರಳಿದ್ದ ಸಿಎಂ ಹಾಗೂ ಸಚಿವರು ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಫಾರಂ-7 ಅರ್ಜಿಗಳನ್ನು ಸಾಮೂಹಿಕವಾಗಿ ಸಲ್ಲಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದರು.

ಬಳಿಕ ಸಿಇಒ ವಿ. ಅನ್ಬುಕುಮಾರ್ ಅವರು ಸುಳ್ಳು ಘೋಷಣೆಗಳೊಂದಿಗೆ ಅರ್ಜಿ ಸಲ್ಲಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande