ಶಾಸ್ತ್ರಿ, ಗಾಂಧೀಜಿ ಜಯಂತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಇಬ್ಬರು ನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
cm-dk-shivakumar-pays-tribute-to-mahatma-gandhi-lal-bahadur-shastri-on-birth-anniversaries


ಬೆಂಗಳೂರು, 02 ಅಕ್ಟೋಬರ್ (ಹಿ.ಸ.):

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ವಿಧಾನಸೌಧದಲ್ಲಿ ಇಬ್ಬರು ನಾಯಕರಿಗೆ ಗೌರವ ನಮನ ಸಲ್ಲಿಸಿದರು.

ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮುಖ್ಯಮಂತ್ರಿ ಗೌರವ ಸಲ್ಲಿಸಿದರು. ಬಳಿಕ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಬಳಿ ಬಾಪೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಧಾನಮಂತ್ರಿಯಾಗಿ ದೇಶವನ್ನು ಮುನ್ನಡೆಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳ ಬದುಕು, ಶಿಸ್ತುಬದ್ಧ ಆಡಳಿತ ಹಾಗೂ ರಾಷ್ಟ್ರದ ಮೇಲಿನ ಅಚಲ ಬದ್ಧತೆ ಇಂದಿಗೂ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಅವರ ತತ್ವಗಳು, ಸರಳ ಜೀವನ ಹಾಗೂ ಅಹಿಂಸೆಯ ಸಂದೇಶವನ್ನು ಸ್ಮರಿಸಿದ ಅವರು, ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಗಾಂಧೀಜಿ ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕ ಸಿ.ಎಸ್. ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ ಯಾದವ್, ಆರತಿ ಕೃಷ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande