ಗಾಂಧೀಜಿ ಸ್ಮಾರಕ ಸ್ತಂಭ ಅನಾವರಣ: ಬಾಪೂ ಹೆಜ್ಜೆ ಗುರುತು ಶಾಶ್ವತಗೊಳಿಸಲು ಸರ್ಕಾರದ ಕ್ರಮ
1915ರಲ್ಲಿ ಮಹಾತ್ಮ ಗಾಂಧೀಜಿಯವರು ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಗಾಂಧೀಜಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನಾವರಣಗೊಳಿಸಲಿದ್ದಾರೆ. ಗಾಂಧೀಜಿಯವರ ವಿಚಾರಧಾರೆಗಳ ಪ್ರಚಾರಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ನೋಡಲ್ ಇ
gandhi-memorial-pillar-to-be-unveiled-at-gas-college-bengaluru


ಬೆಂಗಳೂರು, 02 ಅಕ್ಟೋಬರ್ (ಹಿ.ಸ.):

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಹಾತ್ಮಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಶುಕ್ರವಾರ ಅಂಬೇಡ್ಕರ್ ವೀದಿಯ ಕಲಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಸ್ಮಾರಕ ಸ್ತಂಭ ಅನಾವರಣ ಗೊಳಿಸಿದರು. ಈ ಸಂದರ್ಭದಲ್ಲಿ ಕಲಾವಿದರಾದ ಅರುಣ್ ಯೋಗಿರಾಜ್ ಅವರನ್ನು ಸನ್ಮಾನಿಸಲಾಯಿತು.

ಮಹಾತ್ಮ ಗಾಂಧೀಜಿಯವರು 1915ರಲ್ಲಿ ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ಸ್ಥಳವಾಗಿರುವ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಗಾಂಧೀಜಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಮಾರಕವನ್ನು ಅನಾವರಣಗೊಳಿಸಲಿದ್ದಾರೆ.

ಗಾಂಧೀಜಿಯವರ ಬೆಂಗಳೂರಿನ ಭೇಟಿಯ ಸ್ಮರಣೆಯನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಈ ಸ್ಮಾರಕ ಸ್ತಂಭವನ್ನು ಸ್ಥಾಪಿಸಲಾಗಿದೆ.

ಗಾಂಧೀಜಿಯವರ ವಿಚಾರಧಾರೆಗಳು ಹಾಗೂ ಸ್ವಾತಂತ್ರ್ಯ ಹೋರಾಟದ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

1915ರಲ್ಲಿ ಗಾಂಧೀಜಿಯವರು ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರಿ ಕಲಾ ಕಾಲೇಜಿಗೆ ಭೇಟಿ ನೀಡಿದ್ದರು.

ಆ ಐತಿಹಾಸಿಕ ಭೇಟಿಯ ನೆನಪಿಗಾಗಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ. ಗಾಂಧೀಜಿ ಭೇಟಿ ನೀಡಿದ ರಾಜ್ಯದ 87 ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗಾಂಧೀಜಿಯವರ ವಿಚಾರಧಾರೆಗಳನ್ನು ಪ್ರಚುರಪಡಿಸುವ ಕಾರ್ಯಕ್ಕೆ ಕರ್ನಾಟಕ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ನೋಡಲ್ ಇಲಾಖೆಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

ಮಹಾತ್ಮ ಗಾಂಧೀಜಿಯವರ ಜೀವನ, ಸಂದೇಶ ಹಾಗೂ ತತ್ವಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮಗಳನ್ನು ಇಲಾಖೆಯ ಮೂಲಕ ಕೈಗೊಳ್ಳಲಾಗುತ್ತದೆ.

ಈ ಕುರಿತು ಸರ್ಕಾರದ ಪ್ರಕಟಣೆಯಲ್ಲಿ, ಗಾಂಧೀಜಿಯವರ ಹೆಜ್ಜೆ ಗುರುತುಗಳನ್ನು ಶಾಶ್ವತಗೊಳಿಸುವ ಉದ್ದೇಶದಿಂದ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಮೈಸೂರು, ಗಾಂಧೀಜಿ ಭೇಟಿ ನೀಡಿದ ಸ್ಥಳಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅವರ ಸ್ಮರಣೆಯನ್ನು ಉಳಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ.

ಸಚಿವ ಬಾಲಕೃಷ್ಣ, ದೆಹಲಿಯ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಮಾಜಿ ಸಚಿವರು, ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರು ಹೆಚ್ ಕೆ ಪಾಟೀಲ್, ಬಿಎಲ್ ಶಂಕರ್ ಇನ್ನಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande