ವನ್ಯಜೀವಿ ಸಪ್ತಾಹ ಅಂಗವಾಗಿ ವಾಕ್ಥಾನ್
ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಮಹತ್ವದ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಬೃಹತ್ ವಾಕ್ಥಾನ್ ನಡೆಯಿತು. ವಿಧಾನಸೌಧದಿಂದ ಲಾಲ್ಬಾಗ್ವರೆಗೆ ನಡೆದ ಜಾಥಾದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.
wildlife-week-2026-bengaluru-walkathon-forest-conservation-awareness


ಬೆಂಗಳೂರು, 02 ಅಕ್ಟೋಬರ್ (ಹಿ.ಸ.):

ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶುಕ್ರವಾರ ವಿಧಾನಸೌಧದಿಂದ ಲಾಲ್ಬಾಗ್ವರೆಗೆ ಬೃಹತ್ ವಾಕ್ಥಾನ್ ನಡೆಯಿತು.ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

‘ಒಟ್ಟಾಗಿ ಹೆಜ್ಜೆ ಹಾಕೋಣ, ಕಾಡು ಉಳಿಸೋಣ’ ಎಂಬ ಸಂದೇಶದೊಂದಿಗೆ ನಡೆದ ಜಾಥಾದಲ್ಲಿ ಹಿರಿಯ ಐಎಫ್ಎಸ್ ಅಧಿಕಾರಿಗಳು, ಡಿಸಿಎಫ್ಗಳು, ಎಸಿಎಫ್ಗಳು, ಆರ್ಎಫ್ಒಗಳು, ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡರು.

ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಅಗತ್ಯತೆ ಕುರಿತು ಜನರಲ್ಲಿ ಅರಿವು ಮೂಡಿಸುವುದು ವಾಕ್ಥಾನ್ನ ಪ್ರಮುಖ ಉದ್ದೇಶವಾಗಿತ್ತು.

ಪರಿಸರ ಸಮತೋಲನ ಕಾಪಾಡುವಲ್ಲಿ ಅರಣ್ಯ ಹಾಗೂ ವನ್ಯಜೀವಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, “ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ಪ್ರತಿಯೊಬ್ಬರ ಸಹಭಾಗಿತ್ವ ಅತ್ಯಗತ್ಯ. ನಾವೆಲ್ಲರೂ ಕೈಜೋಡಿಸಿ ಮುಂದಿನ ಪೀಳಿಗೆಗಾಗಿ ಹಸಿರು ಹಾಗೂ ಸುಸ್ಥಿರ ಪರಿಸರವನ್ನು ನಿರ್ಮಿಸಬೇಕು” ಎಂದು ಕರೆ ನೀಡಿದರು.

ವಿಧಾನಸೌಧದಿಂದ ಆರಂಭಗೊಂಡ ವಾಕ್ಥಾನ್ ಲಾಲ್ಬಾಗ್ವರೆಗೆ ಸಾಗಿತು. ವನ್ಯಜೀವಿ ಸಂರಕ್ಷಣೆ, ಅರಣ್ಯ ರಕ್ಷಣೆ ಹಾಗೂ ಪರಿಸರ ಜಾಗೃತಿಗೆ ಸಂಬಂಧಿಸಿದ ಸಂದೇಶಗಳನ್ನು ಸಾರುವ ಮೂಲಕ ಸಾರ್ವಜನಿಕರ ಗಮನ ಸೆಳೆಯಿತು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande