
ಶಿವಮೊಗ್ಗ, 20 ಅಕ್ಟೋಬರ್ (ಹಿ.ಸ.):
ಶಿವಮೊಗ್ಗ ವ್ಯಾಪ್ತಿಯ ಅಂಗನವಾಡಿ ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿ ಖಾಲಿ ಇರುವ 11 ಕಾರ್ಯಕರ್ತೆಯರು ಮತ್ತು 15 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 29ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು 08182-295110 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.