
ಬೆಂಗಳೂರು, 20 ಅಕ್ಟೋಬರ್ (ಹಿ.ಸ.):
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ವಿಜಯೇಂದ್ರ ಅವರು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಯುಧ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ವೈದ್ಯೆ ಡಾ. ವಿಜಯಲಕ್ಷ್ಮಿ ದೇಶಮಾನೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.