ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಪರೀಕ್ಷೆಗಳು ಅಕ್ಟೋಬರ್ ೨೪ಕ್ಕೆ ಮುಂದೂಡಿಕೆ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಪರೀಕ್ಷೆಗಳು ಅಕ್ಟೋಬರ್ ೨೪ಕ್ಕೆ ಮುಂದೂಡಿಕೆ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಪರೀಕ್ಷೆಗಳು ಅಕ್ಟೋಬರ್ ೨೪ಕ್ಕೆ ಮುಂದೂಡಿಕೆ


ಕೋಲಾರ, ೨೦ ಅಕ್ಟೋಬರ್ (ಹಿ.ಸ): ಕರ್ನಾಟಕ ವಿಧಾನ ಪರಿಷತ್ತಿನ ಆತ್ಮೀಯ ಪದವೀಧರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ದೈವಾರ್ಷಿಕ ಚುನಾವಣೆಯನ್ನು ಘೋಷಿಸಿರುವ ಹಿನ್ನೆಲೆಯಲ್ಲಿ, ಸದರಿ ಮತಕ್ಷೇತ್ರಗಳ ವ್ಯಾಪ್ತಿಯ ಅರ್ಹ ಪದವೀಧರ ಮತ್ತು ಶಿಕ್ಷಕ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ ಅಕ್ಟೋಬರ್ ೨೩ ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲಾಗಿದೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವತಿಯಿಂದ ಅಕ್ಟೋಬರ್ ೨೩ಕ್ಕೆ ರಂದು ನಡೆಸಲು ನಿಗದಿಪಡಿಸಲಾಗಿದ್ದ, ಸ್ನಾತಕೋತ್ತರ ಪರೀಕ್ಷೆಗಳನ್ನು ಅಕ್ಟೋಬರ್ ೨೪ಕ್ಕೆ ಮುಂದೂಡಲಾಗಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸಲು ಹಾಗೂ ಪರೀಕ್ಷೆಗಳಿಗೆ ಹಾಜರಾಗಬೇಕೆಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande