ಜಂಬೂ ಸವಾರಿ ಸಿದ್ಧತೆ ಪರಿಶೀಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ
ಮೈಸೂರು, 20 ಅಕ್ಟೋಬರ್ (ಹಿ.ಸ.): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸಂಜೆ ಅರಮನೆ ಆವರಣದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಅರಮನೆ ಆವರಣದಲ್ಲಿನ
ಪರಿಶೀಲನೆ


ಮೈಸೂರು, 20 ಅಕ್ಟೋಬರ್ (ಹಿ.ಸ.):

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸಂಜೆ ಅರಮನೆ ಆವರಣದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಅರಮನೆ ಆವರಣದಲ್ಲಿನ ಆಸನಗಳ ವ್ಯವಸ್ಥೆ, ಬ್ಯಾರಿಕೇಡ್‌ಗಳ ಅಳವಡಿಕೆ ಹಾಗೂ ಗಣ್ಯರ ವಾಹನಗಳ ನಿಲುಗಡೆ ವ್ಯವಸ್ಥೆಯನ್ನು ವೀಕ್ಷಿಸಿ, ಸಿದ್ಧತೆಗಳ ಕುರಿತು ಮಾಹಿತಿ ಪಡೆದರು.

ಸಾರ್ವಜನಿಕರಿಗೆ ಹಾಗೂ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮತ್ತು ಸುರಕ್ಷಿತವಾಗಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್. ಸುಬ್ರಮಣ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande