
ಕಾರವಾರ, 20 ಅಕ್ಟೋಬರ್ (ಹಿ.ಸ.)
ಕರ್ತವ್ಯ ಪಾಲನೆಯ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಸ್ಮರಣಾರ್ಥ ಅಕ್ಟೋಬರ್ 21ರಂದು ಕಾರವಾರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ-2026 ಕಾರ್ಯಕ್ರಮ ಆಯೋಜಿಸಲಾಗಿದೆ ಪೋಲಿಸ್ ಪ್ರಕಟಣೆ ತಿಳಿಸಿದೆ.
ಕಾರವಾರದ ಕಾಜುಬಾಗದಲ್ಲಿರುವ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ದೇಶದ ರಕ್ಷಣೆ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣ ಅರ್ಪಿಸಿದ ಪೊಲೀಸ್ ಹುತಾತ್ಮರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.