ಹೂವಿನಬಾವಿ ಮಹಿಳೆ ಕಾಣೆ: ಪತ್ತೆಗೆ ಮನವಿ
ಸಿರುಗುಪ್ಪ, 21 ಅಕ್ಟೋಬರ್ (ಹಿ.ಸ.) ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದ ನಿವಾಸಿ ಶಾರದ (32) ಅಕ್ಟೋಬರ್ 11 ರಂದು ಸಿರುಗುಪ್ಪದ ಹಳೆಕೋಟೆ ಗ್ರಾಮದ ವೀರಭದ್ರೇಶ್ವರ ಜಾತ್ರೆಯಲ್ಲಿ ಕಾಣೆಯಾಗಿದ್ದಾರೆ. ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರ
ಹೂವಿನಬಾವಿ ಮಹಿಳೆ ಕಾಣೆ: ಪತ್ತೆಗೆ ಮನವಿ


ಸಿರುಗುಪ್ಪ, 21 ಅಕ್ಟೋಬರ್ (ಹಿ.ಸ.)

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದ ನಿವಾಸಿ ಶಾರದ (32) ಅಕ್ಟೋಬರ್ 11 ರಂದು ಸಿರುಗುಪ್ಪದ ಹಳೆಕೋಟೆ ಗ್ರಾಮದ ವೀರಭದ್ರೇಶ್ವರ ಜಾತ್ರೆಯಲ್ಲಿ ಕಾಣೆಯಾಗಿದ್ದಾರೆ.

ಈ ಕುರಿತು ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಪತ್ತೆಗೆ ಸಹಕರಿಸಬೇಕು ಎಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.

ಮಹಿಳೆಯು 5.4 ಅಡಿ ಎತ್ತರ, ಬಿಳಿ ಮೈಬಣ್ಣ ಹಾಗೂ ದುಂಡು ಮುಖ ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಕುಪ್ಪಸ ಹಾಗೂ ಕೆಂಪು ಬಣ್ಣದ ಲಂಗ ಧರಿಸಿರುತ್ತಾಳೆ.

ಕಾಣೆಯಾದ ಮಹಿಳೆ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆಯ ಪಿಎಸ್ಐ ದೂ.08396-248013, ಮೊ.9480803055 ಅಥವಾ ತೆಕ್ಕಲಕೋಟೆ ಸಿಪಿಐ ದೂ.08396-248044 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande