ಪಡಿತರ ಚೀಟಿ : ಇ-ಕೆವೈಸಿ ಕಡ್ಡಾಯ: ನವೆಂಬರ್ 10 ಕೊನೆಯ ದಿನ
ಬಳ್ಳಾರಿ, 21 ಅಕ್ಟೋಬರ್ (ಹಿ.ಸ.) ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸಿದೆ. ಜಿಲ್ಲೆಯಲ್ಲಿ ಬಾಕಿ ಇರುವ ಒಟ್ಟು 6,33,40
ಪಡಿತರ ಚೀಟಿ : ಇ-ಕೆವೈಸಿ ಕಡ್ಡಾಯ: ನವೆಂಬರ್ 10 ಕೊನೆಯ ದಿನ


ಬಳ್ಳಾರಿ, 21 ಅಕ್ಟೋಬರ್ (ಹಿ.ಸ.)

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸಿದೆ.

ಜಿಲ್ಲೆಯಲ್ಲಿ ಬಾಕಿ ಇರುವ ಒಟ್ಟು 6,33,409 ಫಲಾನುಭವಿಗಳ ಪೈಕಿ ಇದುವರೆಗೆ 4,79,995 ಜನರು ಇ-ಕೆವೈಸಿ ಮಾಡಿಸಿಕೊಂಡಿದ್ದು, ಇನ್ನೂ 1,53,414 ಫಲಾನುಭವಿಗಳ ಪ್ರಕ್ರಿಯೆ ಬಾಕಿ ಉಳಿದಿದೆ.

ಇ-ಕೆವೈಸಿ ಮಾಡಿಸಿಕೊಳ್ಳದ ಫಲಾನುಭವಿಗಳು ತಕ್ಷಣವೇ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಥವಾ ‘ಅನ್ನಸೇವೆ’ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ.

ಇ-ಕೆವೈಸಿ ಮಾಡಿಸಲು ನವೆಂಬರ್ 10 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸದ ಫಲಾನುಭವಿಗಳ ವಿರುದ್ಧ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಬಳ್ಳಾರಿ ಉಪ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande