
ಬಳ್ಳಾರಿ, 21 ಅಕ್ಟೋಬರ್ (ಹಿ.ಸ.)
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಗೆ ಅಕ್ಟೋಬರ್ 23 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಕ್ಷೇತ್ರದಾದ್ಯಂತ ಮತದಾನ ನಡೆಯಲಿದ್ದು, ಮತ ಚಲಾಯಿಸಲು ಕ್ಷೇತ್ರದ ಮತದಾರರಿಗೆ ಸರ್ಕಾರ ರಜೆ ಘೋಷಿಸಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ತಿಳಿಸಿದ್ದಾರೆ.
ಮತದಾನಕ್ಕೆ ಕ್ಷೇತ್ರದಾದ್ಯಂತ ಸ್ಥಾಪಿಸಲಾಗಿರುವ 144 ಮತದಾನ ಕೇಂದ್ರದಲ್ಲಿನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಿಗೂ ಅ.23 ರಂದು ರಜೆ ಘೋಷಿಸಲಾಗಿದೆ.
ಇನ್ನು ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿಂದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ಗಣಿತ ವಿಭಾಗದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಭದ್ರತಾ ಕೊಠಡಿಯ ಸಿಬ್ಬಂದಿಗಳಿಗೆ ರಜೆ ಘೋಷಿಸಲಾಗಿದೆ ಎಂದಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್