
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)
ಈಶಾನ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶರಣಪ್ಪ ಮಟ್ಟೂರು ಅವರು ಸರಳ ವ್ಯಕ್ತಿತ್ವ, ಸೈದ್ಧಾಂತಿಕ ಬದ್ಧತೆಯನ್ನು ಹೊಂದಿದ್ದು ಅವರಿಗೆ ಶಿಕ್ಷಕ ಮತದಾರರು ಮೊದಲ ಪ್ರಾಶಸ್ತ್ಯ ಮತವನ್ನು ಚಲಾವಣೆ ಮಾಡುವ ಮೂಲಕ ಅವರನ್ನು ಗೆಲ್ಲಿಸಬೇಕು ಎಂದು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಅಲ್ಲಂ ಪ್ರಶಾಂತ್ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ, ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಶಿಕ್ಷಕ ಕ್ಷೇತ್ರದಲ್ಲಿ ಸಾಕಷ್ಟು ಶಿಕ್ಷಕರ ಪರವಾದ ಯೋಜನೆಗಳನ್ನು ಜಾರಿ ಮಾಡಲಿದ್ದಾರೆ. ಕಾರಣ ಶಿಕ್ಷಕರು ಶರಣಪ್ಪ ಮಟ್ಟೂರು ಅವರಿಗೆ ಮೊದಲ ಪ್ರಾಶಸ್ತ್ಯ ಮತ ಚಲಾವಣೆ ಮಾಡಬೇಕು ಎಂದು ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್