ಬ್ಯಾಂಕಿ0ಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಪರೀಕ್ಷೆಗಳಿಗೆ ಉಚಿತ ತರಬೇತಿ
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾವಿಮು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿ0ಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 45 ದಿನಗಳ ಕಾಲದ ತರಬೇತಿಯನ್ನು ಆಯೋಜಿಸಲಾಗಿದೆ. ಸ್ಪರ್ಧಾತ್ಮಕ
ಬ್ಯಾಂಕಿ0ಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಪರೀಕ್ಷೆಗಳಿಗೆ ಉಚಿತ ತರಬೇತಿ


ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕರಾವಿಮು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿ0ಗ್, ಎಸ್ಎಸ್ಸಿ ಹಾಗೂ ಆರ್ಆರ್ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 45 ದಿನಗಳ ಕಾಲದ ತರಬೇತಿಯನ್ನು ಆಯೋಜಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಆಸಕ್ತ ಅಭ್ಯರ್ಥಿಗಳಿಗೆ ಗುಣಮಟ್ಟದ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರಾವಿಮು ಕುಲಸಚಿವರಾದ ಪ್ರೊ. ಎಂ.ಪಿ. ಸದಾಶಿವ ಅವರು ತಿಳಿಸಿದ್ದಾರೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ದಿನಾಂಕ ಅಕ್ಟೋಬರ್ 31 ರ ಒಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿದೆ.

ನೋ0ದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ) 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande