ಹಲಕುಂದಿ ಗ್ರಾಮದ ನಿವಾಸಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ನಿವಾಸಿ, ಲಾರಿ ಚಾಲಕ ಕೆ.ಬಿ. ಪಂಪಾಪತಿ (41) ಅವರು ನಾಪತ್ತೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಅಕ
ಹಲಕುಂದಿ ಗ್ರಾಮದ ನಿವಾಸಿ ಕಾಣೆ


ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)

ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ನಿವಾಸಿ, ಲಾರಿ ಚಾಲಕ ಕೆ.ಬಿ. ಪಂಪಾಪತಿ (41) ಅವರು ನಾಪತ್ತೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಅಕ್ಟೋಬರ್ 14ರಂದು ಹಂಪಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ತೆರಳಿದ್ದ ಪಂಪಾಪತಿ ಅವರು ಇದುವರೆಗೂ ವಾಪಸ್ ಬಂದಿಲ್ಲ.

*ವ್ಯಕ್ತಿಯ ಚಹರೆ ವಿವರ:*

ಎತ್ತರ 5.4 ಅಡಿ, ಕಪ್ಪು ಮೈಬಣ್ಣ, ದುಂಡು ಮುಖ, ದೃಢವಾದ ಮೈಕಟ್ಟು ಹೊಂದಿದ್ದು, ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು, ಗಡ್ಡ ಬಿಟ್ಟಿರುತ್ತಾರೆ. ಎದೆಯ ಮೇಲೆ ‘ವೇದ', ಬಲಗೈ ಮೇಲೆ ‘ಅಮ್ಮ' ಹಾಗೂ ‘ಕಾವ್ಯ' ಎಂದು ಹಚ್ಚೆ (ಟ್ಯಾಟೂ) ಹಾಕಿಸಿಕೊಂಡಿದ್ದಾನೆ.

ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಬಿಸ್ಕೆಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.

ಈ ಚಹರೆವುಳ್ಳ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಸಾರ್ವಜನಿಕರು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ: 08392-276461, 9480803049, ಪೊಲೀಸ್ ಕಂಟ್ರೋಲ್ ರೂಂ, ಬಳ್ಳಾರಿ: 08392-258100 ಗೆ ಸಂಪರ್ಕಿಸಬಹುದು ಎಂದು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande