
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)
ಜಿಲ್ಲಾ ಕೇಂದ್ರದಲ್ಲಿ ನವೆಂಬರ್ 01 ರಂದು 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುವ ಸಂಬಂಧವಾಗಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಕರೆಯಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಡಾ. ರಾಜ್ ಕಮಾರ್ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಸಭೆ ಜರುಗಲಿದೆ.
ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಯಾವುದೇ ಪ್ರತಿನಿಧಿಗಳನ್ನು ನಿಯೋಜಿಸದೆ, ಖುದ್ದಾಗಿ ಮತ್ತು ನಿಗದಿತ ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗುವಂತೆ ಜಿಲ್ಲಾಡಳಿತ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್