ಮದ್ದೂರು: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸವಾರರು ದುರ್ಮರಣ
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಸರಾ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ಈ ಅಪಘಾತ ಸಂಭವಿಸಿದೆ.
Mandya-Maddur-Bike-Accident-Two-Dead-One-Seriously-Injured


ಮಂಡ್ಯ, 22 ಅಕ್ಟೋಬರ್ (ಹಿ.ಸ.):

ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಗೌಡಗೆರೆ ಗ್ರಾಮದ ಅಭಿಷೇಕ್ (25) ಹಾಗೂ ಮರಕಾಡುದೊಡ್ಡಿ ಗ್ರಾಮದ ಬೋರೆಗೌಡ (24) ಮೃತಪಟ್ಟ ದುರ್ದೈವಿಗಳು.

ದಸರಾ ಆಚರಣೆ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande