ಬಳ್ಳಾರಿ: ಅಕ್ಟೋಬರ್ 23 - ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಈ ಬಾರಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ - 2026ರ ಮಾದರಿ ನೀತಿ ಸಂಹಿ
ಬಳ್ಳಾರಿ: ಅಕ್ಟೋಬರ್ 23 - ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ


ಬಳ್ಳಾರಿ, 22 ಅಕ್ಟೋಬರ್ (ಹಿ.ಸ.)

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಈ ಬಾರಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ - 2026ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಅಕ್ಟೋಬರ್ 23 ರಂದು ಬೆಳಗ್ಗೆ 10:30 ಗಂಟೆಗೆ ಬಳ್ಳಾರಿ ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯದ ‘ಹೊಂಗಿರಣ'ದಲ್ಲಿ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸುವ ಮೂಲಕ ಜಯಂತಿಯನ್ನು ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande