ಮಂಡ್ಯದಲ್ಲಿ ಎರಡು ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಶೀಘ್ರ ಭೂಮಿ ನೀಡಿ:ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, 22 ಅಕ್ಟೋಬರ್ (ಹಿ.ಸ.): ಮಂಡ್ಯ ಜಿಲ್ಲೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ಹಾಗೂ ವಿದ್ಯುತ್ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ ಸ್ಥಾಪಿಸಲು ಕಳೆದ 10 ತಿಂಗಳಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ
ಎಚ್.ಡಿ.ಕೆ. ಪತ್ರ


ಬೆಂಗಳೂರು, 22 ಅಕ್ಟೋಬರ್ (ಹಿ.ಸ.):

ಮಂಡ್ಯ ಜಿಲ್ಲೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ಹಾಗೂ ವಿದ್ಯುತ್ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ ಸ್ಥಾಪಿಸಲು ಕಳೆದ 10 ತಿಂಗಳಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು, ಶೀಘ್ರ ಭೂಮಿ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 'ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ' ಹಾಗೂ 'ವಿದ್ಯುತ್ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ' ಸ್ಥಾಪನೆಗೆ ಕರ್ನಾಟಕ ಸರ್ಕಾರ ಭೂಮಿ ಮಂಜೂರು ಮಾಡಬೇಕಿದೆ. ಆದರೆ, ಕಳೆದ 10 ತಿಂಗಳಿಂದ ಈ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಮಂಡ್ಯದಲ್ಲಿಯೇ ಕೈಗಾರಿಕೆ ಸ್ಥಾಪಿಸಲು ಕುಮಾರಸ್ವಾಮಿ ಅವರಿಗೆ ಸಾವಿರ ಎಕರೆ ಭೂಮಿಯನ್ನು ಬೇಕಾದರೂ ನೀಡುತ್ತೇವೆ ಎಂದು ಮುಖ್ಯಮಂತ್ರಿ ನೀಡಿದ್ದ ಹೇಳಿಕೆಯನ್ನು ಪತ್ರದಲ್ಲಿ ನೆನಪಿಸಿರುವ ಅವರು, ಕೇಂದ್ರ ಸರ್ಕಾರದ ಸ್ವಾಮ್ಯದ ಈ ಕೈಗಾರಿಕಾ ಯೋಜನೆಗಳ ಸ್ಥಾಪನೆಗೆ ಆದಷ್ಟು ಬೇಗ ಭೂಮಿ ಒದಗಿಸಬೇಕು ಎಂದು ಕೋರಿದ್ದಾರೆ.

ಭೂಮಿ ಮಂಜೂರಾತಿಯ ವಿಳಂಬದಿಂದ ರಾಜ್ಯದ ಕೈಗಾರಿಕಾ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬೀಳಬಾರದು ಎಂಬುದು ತಮ್ಮ ಕಳಕಳಿಯಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande