
ಬಳ್ಳಾರಿ, 23 ಅಕ್ಟೋಬರ್ (ಹಿ.ಸ.)
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ವತಿಯಿಂದ 2026ರ ಡಿಸೆಂಬರ್ 23 ರಿಂದ 25 ರವರೆಗೆ ಬಾಗಲಕೋಟೆಯ ಉದ್ಯಾನಗಿರಿಯ ಮುಖ್ಯ ಆವರಣದಲ್ಲಿ ‘ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ’ ಎಂಬ ಧ್ಯೇಯದೊಂದಿಗೆ ‘ತೋಟಗಾರಿಕೆ ಮೇಳ-2026' ಅನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ 25 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಇಚ್ಛಿಸುವ ಬಳ್ಳಾರಿ ಜಿಲ್ಲೆಯ ತೋಟಗಾರಿಕೆ ರೈತರು ಅಥವಾ ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ತೋಟಗಾರಿಕೆ ಮಹಾವಿದ್ಯಾಲಯದ ವಿಳಾಸದಿಂದ ಅಥವಾ ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ (www.uhsbagalkot.kar.gov.in) ಮೂಲಕ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 09 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕಾಗಿದೆ.
*ಅರ್ಜಿ ಸಲ್ಲಿಸಬೇಕಾದ ವಿಳಾಸ:*
ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಹುಲಿಗಿ ಕ್ರಾಸ್, ಎನ್.ಹೆಚ್-50, ಹೊಸಲಿಂಗಾಪುರ, ಮುನಿರಾಬಾದ್ - 583 233, ಕೊಪ್ಪಳ ತಾಲೂಕು ಮತ್ತು ಜಿಲ್ಲೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಮೊ.9480696399 ಅಥವಾ 8147706739 ಅನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ (ಮುನಿರಾಬಾದ್) ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್