
ಬೆಂಗಳೂರು, 23 ಅಕ್ಟೋಬರ್ (ಹಿ.ಸ.):
ಕಾಂಗ್ರೆಸ್ ಪಕ್ಷ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಿದ್ದರಿಂದಲೇ ಇಂದು ಪ್ರಧಾನಮಂತ್ರಿಗಳು ಆ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದ ತಾಜ್ ವೆಸ್ಟ್ ಎಂಡ್‌ನಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಮೇಲೆತ್ತಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂಬ ಟೀಕೆಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಇಲ್ಲವಾಗಿದ್ದರೆ ದೇಶಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಈ ವಿಚಾರ ಪ್ರಧಾನಮಂತ್ರಿಗಳಿಗೂ ತಿಳಿದಿದೆ. ನಾವು ನಮ್ಮ ಮೂಲವನ್ನು ಮರೆಯಬಾರದು. ಮೂಲವನ್ನು ಮರೆತರೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ವಿಶ್ವವೇ ಎದುರು ನೋಡುತ್ತಿರುವ ನಾಯಕ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಪದೇಪದೆ ವಿದೇಶಗಳಿಗೆ ಭೇಟಿ ನೀಡುತ್ತಿರುವ ಬಗ್ಗೆ ಬಿಜೆಪಿ ಎತ್ತಿರುವ ಪ್ರಶ್ನೆಗಳ ಕುರಿತು ಕೇಳಿದಾಗ, ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅನೇಕ ವಿದೇಶಿ ನಾಯಕರು ಹಾಗೂ ವಿಶ್ವವಿದ್ಯಾಲಯಗಳು ಅವರಿಗೆ ಆಹ್ವಾನ ನೀಡುತ್ತವೆ. ರಾಹುಲ್ ಗಾಂಧಿ ಅವರು ಇಡೀ ವಿಶ್ವವೇ ಎದುರು ನೋಡುತ್ತಿರುವ ನಾಯಕ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.